ನವದೆಹಲಿ: ಡಿಮಾನಿಟೈಸೇಷನ್​ ಬಳಿಕ ಚಲಾವಣೆಗೆ ಬಂದ 2000 ರೂಪಾಯಿ ಮುಖಬೆಲೆಯ ನೋಟು ಸದ್ಯದಲ್ಲೇ ರದ್ದಾಗಲಿದೆ ಎಂಬ ಬಗ್ಗೆ ಗುಸುಗುಸು ಸುದ್ದಿಗಳು ಹಲವು ದಿನಗಳಿಂದ ಹರಿದಾಡುತ್ತಲೇ ಇವೆ.

ಇತ್ತೀಚೆಗೊಮ್ಮೆ 2000 ರೂಪಾಯಿ ಮುಖಬೆಲೆಯ ನೋಟಿನ ಮುದ್ರಣ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿಯೂ ಹರಿದಾಡಿತ್ತು. ಹೀಗಾಗಿ ಸಾರ್ವಜನಿಕರಲ್ಲಿ ಕೆಲವರು 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸುವಾಗ ಯೋಚಿಸಿ ಯೋಚಿಸಿಯೇ ತೆಗೆದುಕೊಳ್ಳಲಾರಂಭಿಸಿದ್ದಾರೆ.
ಸದ್ಯ ಸಂಸತ್ತಿನಲ್ಲಿ ಈ ಬಗ್ಗೆ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿರುವುದು ಸಾರ್ವಜನಿಕರಲ್ಲಿ ಒಂದಷ್ಟು ನಿರಾಳತೆ ಮೂಡಿಸಿದೆ. 2000 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಗೊಳಿಸುವ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಂಸತ್ತಿಗೆ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)

You Might Also Like

" data-numposts="10" data-width="">