ನವದೆಹಲಿ: ಕೋವಿಡ್ 2ನೇ ಅಲೆ ತೀವ್ರವಾಗಿ ಹಬ್ಬುತ್ತಿರುವ ನಡುವೆಯೇ ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 47, 262 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು 2021ನೇ ಇಸವಿಯಲ್ಲಿ ಒಂದೇ ದಿನದ ಗರಿಷ್ಠ ಪ್ರಮಾಣದ ಪ್ರಕರಣವಾಗಿದೆ. ದೇಶಾದ್ಯಂತ ಒಟ್ಟು 1,17,34,058 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

 

ದೇಶದಲ್ಲಿ ಸತತ 14ನೇ ದಿನವೂ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇದೀಗ 3,68,457 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕೋವಿಡ್ ಸೋಂಕಿನ ಚೇತರಿಕೆಯ ಪ್ರಮಾಣ 95.49ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ.

ಕಳೆದ 132 ದಿನಗಳಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ದೇಶದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

You Might Also Like

" data-numposts="10" data-width="">