ಬೆಂಗಳೂರು, ಜು.5: ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿ ಜನವರಿವರೆಗೆ ಮಾತ್ರ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಕ್ಷಾ ರಾಮಯ್ಯ ಅವರು ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ 2022ರ ಜನವರಿ 31ರವರೆಗೆ ಮುಂದುವರಿಯಲಿದ್ದು, ಜನವರಿ 31ರಿಂದ ಮುಹಮ್ಮದ್​ ನಲಪಾಡ್ ಯುವ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಮುಹಮ್ಮದ್ ನಲಪಾಡ್ ಅವರು ಅತೀ ಹೆಚ್ಚಿನ ಮತಗಳನ್ನು ಪಡೆದಿದ್ದರು. ಆದರೆ ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಿತ್ತು. ಅವರ ಬಳಿಕ ಎರಡನೇ ಸ್ಥಾನದಲ್ಲಿದ್ದ ರಕ್ಷಾ ರಾಮಯ್ಯ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Source: Vartha Bharathi

You Might Also Like

" data-numposts="10" data-width="">