ಬೆಂಗಳೂರು: ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 24ರಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂವನ್ನು ಜಾರಿಯಾಗುವ ಮೊದಲೇ ದಿಢೀರ್ ಆಗಿ ವಾಪಸ್ ಪಡೆದಿದೆ.

ಡಿಸೆಂಬರ್ 24ರ ರಾತ್ರಿ 11ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ಬುಧವಾರ(ಡಿಸೆಂಬರ್ 23) ಆದೇಶ ಹೊರಡಿಸಿತ್ತು. ಆದರೆ ರಾತ್ರಿ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಾಪಸ್ ಪಡೆದಿದೆ ಎಂದು ವರದಿ ತಿಳಿಸಿದೆ.

ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ರಾತ್ರಿ ಕರ್ಫ್ಯೂ ಬಗ್ಗೆ ವ್ಯಾಪಾರಿಗಳು, ವಿಪಕ್ಷ ಕಾಂಗ್ರೆಸ್ ಮುಖಂಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ ಯತ್ನಾಳ್ ಕೂಡಾ ತೀವ್ರವಾಗಿ ವಿರೋಧಿಸಿದ್ದರು.

You Might Also Like

" data-numposts="10" data-width="">